ರಾಷ್ಟ್ರೀಯ ಸಂವಿಧಾನ ದಿನ
ರಾಷ್ಟ್ರೀಯ ಸಂವಿಧಾನ ದಿನ
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಇಂದು ನಮ್ಮ ಶಾಲೆಯಲ್ಲಿ ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಧಾನ ಗುರುಗಳು ಶಾಲೆಯ ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿ ಮತ್ತು ಮುದ್ದು ಮಕ್ಕಳು ಉಪಸ್ಥಿತರಿದ್ದು
ಸಂವಿಧಾನ ಶಿಲ್ಪಿ
ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು
ನಂತರ ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ತದನಂತರ ಪ್ರಧಾನ ಗುರುಗಳು ಹಾಗೂ ಶಿಕ್ಷಕರು ಮಕ್ಕಳಿಗೆ ಸಂವಿಧಾನ ದಿನಾಚರಣೆಯ ಮಹತ್ವವನ್ನು ತಿಳಿಸಲಾಯಿತು .
ಸಂವಿಧಾನ ಎಂಬುವುದು ನಮ್ಮೆಲ್ಲರ ಹೆಮ್ಮೆ ಸಂವಿಧಾನವನ್ನು ಗೌರವಿಸುವುದು ಭಾರತೀಯರಾದ ನಮ್ಮ ಕರ್ತವ್ಯ
ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಲು ಹಾಗೂ ಮೂಲ ಆಶಯಗಳನ್ನು ಅರಿಯಲು ನವೆಂಬರ್ 26ರಂದು ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಸಾಮೂಹಿಕವಾಗಿ ಓದೋಣ
ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ ಮತ್ತು ಸಮಾನತೆಯನ್ನು ದೊರಕಿಸಿಕೊಟ್ಟ ವಿಶ್ವದ ಶ್ರೇಷ್ಠ ಸಂವಿಧಾನ ಭಾರತದ ಸಂವಿಧಾನ ಅಂಗೀಕಾರವಾದ ದಿನವಿಂದು
ಈ ಪವಿತ್ರ ದಿನದಂದು ಸಂವಿಧಾನದ ಸೃಷ್ಟಿಕರ್ತನಾದ ಡಾ ಬಿ ಆರ್ ಅಂಬೇಡ್ಕರ್ ಅವರ ಸ್ಮರಿಸೋಣ
ಭಾರತದ ಸಂವಿಧಾನ
ಪೀಠಿಕೆ
ಭಾರತದ ಜನತೆಯಾದ ನಾವು, ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ
ರೂಪಿಸುವುದಕ್ಕಾಗಿ; ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು; ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು; ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ; ವ್ಯಕ್ತಿಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಿ, ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿಯ ನವೆಂಬರ್ ತಿಂಗಳ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ.
ಪ್ರಧಾನ ಗುರುಗಳು
ಶ್ರೀಯುತ ಜಿ ಎಸ್ ಹುಬ್ಬಳ್ಳಿ
ಸಹ ಶಿಕ್ಷಕರು
ಶ್ರೀಮತಿ ಮಂಜುಳಾ ಮುಕ್ರಿ
ಶ್ರೀ ಬಿ ಐ ಕೆಂಚನಗೌಡ್ರ

























