ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ
ಶಾಂತಿನಗರ ಬ್ಯಾಹಟ್ಟಿ
ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ
ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ
ಸಾವಿತ್ರಿಬಾಯಿ ಫುಲೆ ೧೮೩೧ರಲ್ಲಿ ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು ಜ್ಯೋತಿಬಾಫುಲೆಯವರನ್ನು ಲಗ್ನವಾದರು. ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.
ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು. ೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಬೇತಿ ಪಡೆದರು. ಆಗ ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಿ ಆದ ಮೊದಲ ಶಿಕ್ಷಕಿಯಾದರು.
- ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
- ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
ಬ್ರಿಟಿಷ್ ಸರಕಾರ ಇವರಿಗೆ "ಇಂಡಿಯಾಸ್ ಫಸ್ಟ್ ಲೇಡಿ ಟೀಚರ್" ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.
ಕವನಸಂಕಲನ
- ಕಾವ್ಯಫೂಲೆ (ಕಾವ್ಯ ಅರಳಿದೆ)-೧೮೫೪
ಆತ್ಮಕಥೆ
- ಭವನಕಾಶಿ ಸುಬೋಧ ರತ್ನಾಕರ್(ಅಪ್ಪಟ ಮುತ್ತುಗಳ ಸಾಗರ)-೧೮೯೧
ಸಂಪಾದಿತ ಕೃತಿ
- ಜ್ಯೋತಿಬಾ ಅವರ ಭಾಷಣಗಳು -೧೮೯೨
ಪ್ರಬಂಧ
- ಕರ್ಜೆ(ಸಾಲ)
ಬದಲಾವಣೆಯ ಹರಿಕಾರಬದಲಾಯಿಸಿ
- ೧೮೪೮ ರಲ್ಲಿ ಪತಿ ಜ್ಯೋತಿಬಾ ಫುಲೆಯವರೊಂದಿಗೆ ಸೇರಿ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು.
- ೧೮೫೫ ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿಪಾಳೆಯದ ಶಾಲೆ ಸ್ಥಾಪನೆ.
- ೧೮೬೮ ರಲ್ಲಿ ದಲಿತರಿಗಾಗಿ ಮನೆಯ ಕುಡಿಯುವ ನೀರಿನ ಟ್ಯಾಂಕನ್ನು ಬಿಟ್ಟುಕೊಟ್ಟರು.
- ಬ್ರಾಹ್ಮಣ ವಿಧವೆಯ ಮಗುವೊಂದನ್ನು ದತ್ತು ತೆಗೆದುಕೊಂಡುದು.
- ಪಶ್ಚಿಮ ಮಹಾರಾಷ್ಟ್ರದ ಕ್ಷಾಮ ಪ್ರದೇಶಗಳಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದುದು.

